ಕೊಡಿ
ಎಂದು ತಿಳಿಸಿದೆ. ಅವರು ಇಲ್ಲ ನೀವೇ ಬರಬೇಕು
,
ಇಲ್ಲಿಯೋರೆಲ್ಲ ನಿಮ್ಮನ್ನ ನೋಡ್ಬೇಕು ಅಂತ ಇದಾರೆ ಎಂದು ಬರೆದು ಒತ್ತಾಯ ಮಾಡಿದರು.
ನಾನು ಅವರಿಗೆ ಉತ್ತರ ಬರೆದೆ. ನಾಲ್ಕು ಷರತ್ತುಗಳನ್ನು ಹಾಕಿದೆ; ಒಂದನೆಯದು,
ಕನ್ನಡ ಅಧಿಕೃತ ಭಾಷೆಯಾಗಬೇಕು; ಎರಡನೆಯದು, ಮೈಸೂರಿನ ಹೆಸರು
ಕರ್ನಾಟಕ ಎಂದಾಗಬೇಕು; ಮೂರನೆಯದು, ರಾಜ್ಯಾಂಗದ ಪ್ರಕಾರ ರಾಜ್ಯಪಾಲರ
ನೇಮಕ ಆಗಬೇಕು; ನಾಲ್ಕನೆಯದು ಬೋಧನಾ ಭಾಷೆ ಕನ್ನಡ ಆಗಬೇಕು.
ಇವು ನಾಲ್ಕು ಆದ ನಂತರ ಬಂದು ಸಂತೋಷದಿಂದ ಡಾಕ್ಟರೇಟ್
ಸ್ವೀಕರಿಸುತ್ತೇನೆ ಎಂದು ಹೇಳಿದೆ. ಕನ್ನಡ ಅಧಿಕೃತ ಭಾಷೆ ಆಗಬೇಕು ಅಂತ
ಕಾಗದದ ಮೇಲೇನೊ ಆಗಿದೆ. ರಾಜ್ಯಾಂಗದ ಪ್ರಕಾರ ರಾಜ್ಯಪಾಲರ ನೇಮಕವೂ
ಆಗುವಂತಿದೆ. ನಮಗೆ ಈ ದಾಸ್ಯದ ಮನೋಭಾವ ಹೋಗಬೇಕಾದರೆ ಬೇರೆ
ರಾಜ್ಯಪಾಲರು ಬರಬೇಕು. ಈಗ ಇರುವ ಮಹಾರಾಜರೇ ಬೇರೆ ಕಡೆ ಹೋಗಿ ಮತ್ತೆ
ಬೇಕಾದರೆ ಬರಲಿ. ಆಗ ಸರಿಹೋಗುತ್ತೆ. ಆದರೆ ಹಿಂದೆ ಮಹಾರಾಜರಾಗಿದ್ದವರೆ
ರಾಜ್ಯಪಾಲರಾಗಿ ಮುಂದುವರಿಯುವುದು ದಾಸ್ಯ ಮನೋವೃತ್ತಿಯ ಬದಲಾವಣೆಗೆ
ಸಹಾಯವಾಗುವುದಿಲ್ಲ. ನಾವು ಸೊಂಟ ಬಗ್ಗಿಸಿ ಬೆನ್ನು ಗೂನು ಮಾಡಿಕೊಂಡಿದ್ದೀವಿ.
ಗೂನು ಬೆನ್ನೇ ನಮಗೆ ಲಕ್ಷಣವಾಗಿ ಕಾಣುವಷ್ಟರಮಟ್ಟಿಗೆ ನಾವು ಅದಕ್ಕೆ ಹೊಂದಿಕೊಂಡಿದ್ದೇವೆ.
ನೆಟ್ಟಗೆ ನಿಂತರೆ ಎಲ್ಲಿ ಬೆನ್ನುಲುಬು ಮುರಿಯುತ್ತೋ ಎಂದು ಹೆದರಿದ್ದೇವೆ. ನಮ್ಮ
ಜನರ ಈ ಅಜ್ಞಾನ, ಈ ದಾಸ್ಯ, ಈ ಸಣ್ಣ ತನಕ್ಕೆ ಎರಡು ಕಾರಣ; ಒಂದು
ಗುರುಮನೆ; ಮತ್ತೊಂದು ಅರಮನೆ. ಅರಮನೆಯೇನೋ ಹೋಯಿತು ಈ
ಗುರುಮನೆ ಇನ್ನೂ ಭದ್ರವಾಗಿ ಬೇರೂರಿದೆ. ಅಜ್ಞಾನಿಗಳಿಂದ ಹಣ ಕಿತ್ತು ತಿನ್ನುವ
ಈ ಮಠಗಳಿಂದ ದೇಶಕ್ಕಾಗುವ ಅನಾಹುತ ಅಷ್ಟಿಷ್ಟಲ್ಲ. ....
" ಎಂದರು.
ಇಷ್ಟರಲ್ಲಿ ಕುವೆಂಪು ಅವರ ಕಿರಿಯ ಮಗಳು ಕಾಫಿ ತಂದಿಟ್ಟು ಹೋದಳು. ಅದನ್ನು ಕುಡಿಯುತ್ತಾ, ಕುಡಿಯುತ್ತಾ ಅವರಿಗೆ ಹುಮ್ಮಸ್ಸು ಬಂದಂತಾಯಿತೋ ಏನೋ
" ಸ್ವಾಮಿ ವಿವೇಕಾನಂದರ ಧೀರವಾಣಿ ಹಳ್ಳಿ ಹಳ್ಳಿಗಳಿಗೆಲ್ಲ ಹರಡಬೇಕು, ಷಂಡರನ್ನು ಧೀರರನ್ನಾಗಿ ಮಾಡುವ ವಾಣಿ ಅದು.
ನನ್ನ ಜೀವನದಲ್ಲೇ ಅದ್ಭುತ ಬದಲಾವಣೆ ಮಾಡಿದರು ಅವರು. ಮೊನ್ನೆ ಅವರ ಶತಮಾನೋತ್ಸವ ನಡೆಯಿತಲ್ಲ, ಅದನ್ನು ಶೃಂಗೇರಿ ಮುಂತಾದ ಮಠಗಳಲ್ಲಿ
ಆಚರಿಸಿದರೇನು? ಇಲ್ಲ! ಅವರಿಗೆ ಆ ವಾಣಿಯನ್ನು ಕೇಳುವ ಆಸೆಯಿಲ್ಲ. ಕೇಳಿದರೆ ಅವರ ಕಾಣಿಕೆ ಕಾಸಿಗೇ ಚಕ್ಕರ್! " ಎಂದು ಹೇಳಿ ನಕ್ಕರು.
ಹೀಗೆಂದವರು ಎದ್ದು ಒಳಗೆ ಹೋಗಿ `ವಿವೇಕಾನಂದ ಕೃತಿ ಶ್ರೇಣಿ' ಎಂಬ ಹತ್ತು ಕನ್ನಡ ಪುಸ್ತಕಗಳನ್ನು ತಂದು ಮುಂದೆ ಪೇರಿಸಿಟ್ಟರು.
ಮೊದಲನೇ ಸಂಪುಟದಲ್ಲಿ ನನ್ನ ಮುನ್ನುಡಿ ಇದೆ. ಎಲ್ಲಾ ಸೇರಿ ೬೦ ರಿಂದ ೭೦ ರೂಪಾಯಿ ಆಗಬಹುದು. ಇದರ ಒಂದೊಂದು ಕಟ್ಟು ತಕ್ಕೊಂಡ್ಹೋಗಿ
ಹಳ್ಳೀಲಿ ಇಟ್ಟುಬಿಡಿ. ಯಾರಾದರೂ ಇದಕ್ಕೆ ಢಿಕ್ಕಿ ಹೊಡೆದಾಗ ಈ ಡೈನಮೈಟ್ ಸಿಡಿದು ಹೋಗುತ್ತದೆ. ಆಗ ನೋಡಿ, ಇದು ಮಾಡುವ ಕೆಲಸವನ್ನು!
ಎಂದು ಕುವೆಂಪು ಮಹಾವಿಧ್ವಂಸಕ ಗೂಢಾಚಾರನಂತೆ ನುಡಿದರು. "ಭೇಷ್ ನನ್ನಪ್ಪ! " ಎಂದೆ ನನಗೆ ನಾನೇ.
ವಿವೇಕಾನಂದರ
ಬಗ್ಗೆ ಅಮೇರಿಕಾ ಮಹಿಳೆಯೊಬ್ಬಳು ಬರೆದಿರುವ ಉದ್ಗ್ರಂಥವೊಂದನ್ನು ಪ್ರಸ್ತಾಪಿಸುತ್ತಾ
ಅದರಲ್ಲಿ ಬರುವ
anecdotes
ಗಳ ಬಗ್ಗೆ
ಹೇಳಿದರು. ವಿವೇಕಾನಂದರ ಪ್ರಜ್ಞೆ, ಪ್ರತಿಭೆ, ಜ್ಞಾಪಕ ಶಕ್ತಿ- ಇವುಗಳನ್ನು
ವರ್ಣಿಸುತ್ತಾ
"ಬೇಕಾದರೆ ಇಂಗ್ಲೀಷ್ ವಿಶ್ವಕೋಶವನ್ನು ಒಮ್ಮೆ ತಿರುವು ಹಾಕಿ
ಯಾವುದನ್ನು ಕೇಳಿದರೂ ಹೇಳಬಹುದಾದಷ್ಟು ಜ್ಞಾಪಕ ಶಕ್ತಿ ಇತ್ತು. ವೇದೊಪನಿಷತ್ತುಗಳು
ಅವರ ಕಂಠಗತವಾಗಿದ್ದವು. ಈ ಶಕ್ತಿ ಹೇಗೆ ಬಂತು ಅಂತ ಕೇಳಿದರೆ ಅವರು ಪಾಲಿಸಿದ
ಬ್ರಹ್ಮಚರ್ಯದಿಂದ ! ಒಮ್ಮೆ ಯಾರೋ ರಾಮಕೃಷ್ಣ ಪರಮಹಂಸರನ್ನು
ಕೇಳಿದರಂತೆ ಈ ಶಕ್ತಿ ಹೇಗೆ ಬರುತ್ತೆ ಅಂತ. ಅದಕ್ಕೆ ಅವರು ಹೇಳಿದರು, `ಯಾರು
ಕಾಯಾ, ವಾಚಾ, ಮನಸಾ ಹನ್ನೆರಡು ವರ್ಷಗಳು ಬ್ರಹ್ಮಚರ್ಯ ಪಾಲಿಸುತ್ತಾರೋ
ಅವರಿಗೆ ಇದು
ಸಿದ್ಧಿಸುವುದು' ಎಂದು.
" ಇದು ನನಗೂ ಸಾಧ್ಯ,
ನಿಮಗೂ ಸಾಧ್ಯ
" ಎಂದರು ಕುವೆಂಪು
.